We Believe JesusFé, Esperança e Nova Vida

1 ಕೊರಿ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

1 ಕೊರಿ 1 ಕೊರಿ 2 →

1ದೇವರ ಚಿತ್ತದಂತೆ 1:1 ರೋಮಾ. 1:1ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ 1:1 ಅ. ಕೃ. 18:17ಸೊಸ್ಥೆನನೂ,

2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, 1:2 ಅವರಿಗೂನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,

31:3 ರೋಮಾ. 1:7ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.

4ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ 1:4 ರೋಮಾ. 1:8ದೇವರನ್ನು ಕೊಂಡಾಡುತ್ತೇನೆ.

5ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.

6ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.

71:7 ರೋಮಾ. 8:19; ಫಿಲಿ. 3:20; ಇಬ್ರಿ. 9:28ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,

8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು 1:8 ಫಿಲಿ. 1:6; 1 ಥೆಸ. 3:13ಕಡೆಯವರೆಗೂ ದೃಢಪಡಿಸುವನು.

91:9 1 ಯೋಹಾ 1:3ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.

10ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ 1:10 1 ಕೊರಿ 11:18ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.

11ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು 1:11 1 ಕೊರಿ 3:3-4ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.

12ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

13ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?

14ನಿಮ್ಮಲ್ಲಿ 1:14 ಅ. ಕೃ. 18:8ಕ್ರಿಸ್ಪನಿಗೂ ಮತ್ತು 1:14 ರೋಮಾ. 16:23ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.

15ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ.

16ಇದಲ್ಲದೆ 1:16 1 ಕೊರಿ 16:15,17ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.

17ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು 1:17 1 ಕೊರಿ 2:1,4,13ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.

18ಶಿಲುಬೆಯ ಸಂದೇಶವು 1:18 2 ಕೊರಿ 2:15; ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು 1:18 ವ. 24; ರೋಮಾ. 1:16ದೇವರ ಶಕ್ತಿಯಾಗಿದೆ.

19“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.

20ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? 1:20 1 ಕೊರಿ 2:6; 3:19; 1:26ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?

21ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.

221:22 ಮತ್ತಾ 12:38ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;

23ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು 1:23 ಗಲಾ. 5:11ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.

24ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.

25ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.

26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, 1:26 1 ಕೊರಿ 2:8; ಯೋಹಾ 7:48ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.

271:27 ಯಾಕೋಬ 2:5ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; 1:27 ಕೀರ್ತ 8:2ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.

28ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ 1:28 ರೋಮಾ. 4:17ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.

291:29 ಎಫೆ 2:9ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.

30ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

311:31 ಯೆರೆ 9:2324; 2 ಕೊರಿ 10:17“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.

1 ಕೊರಿ 1 ಕೊರಿ 2 →

1 ಕೊರಿ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ