We Believe JesusFé, Esperança e Nova Vida

1 ಕೊರಿ 10

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← 1 ಕೊರಿ 9 1 ಕೊರಿ 1 ಕೊರಿ 11 →

1ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ 10:1 ವಿಮೋ 13:21ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.

210:2 ವಿಮೋ 14:22ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.

3ಅವರೆಲ್ಲರೂ 10:3 ಯೋಹಾ 6:31ಆತ್ಮೀಕವಾದ 10:3 ವಿಮೋ 16:15,35ಒಂದೇ ಆಹಾರವನ್ನು ತಿಂದರು.

410:4 ವಿಮೋ 17:6 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.

5ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. 10:5 ಅರಣ್ಯ 14:16,19ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.

610:6 ಅರಣ್ಯ 11:4,33; ಕೀರ್ತ 106:14ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.

7ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, 10:7 ವಿಮೋ 32:6“ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. 10:7 1 ಕೊರಿ 10:14ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.

810:8 ಅರಣ್ಯ 25:1-9ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. 10:8 1 ಕೊರಿ 6:18ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.

910:9 ಅರಣ್ಯ 21:5,6ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.

1010:10 ಅರಣ್ಯ 14:2, 29-37ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.

11ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು 10:11 ರೋಮಾ. 4:23,24ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.

1210:12 ರೋಮಾ. 11:20ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.

13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. 10:13 1 ಕೊರಿ 1:9ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ 10:13 2 ಪೇತ್ರ. 2:9ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

14ಆದ್ದರಿಂದ ಪ್ರಿಯರೇ, 10:14 1 ಕೊರಿ 10:7ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.

15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.

1610:16 ಮತ್ತಾ 26:27,28ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? 10:16 ಮತ್ತಾ 26:27; 1 ಕೊರಿ 11:23,24ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?

17ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು 10:17 1 ಕೊರಿ 12:12,13; ರೋಮಾ. 12:5; ಕೊಲೊ 3:15ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.

18ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. 10:18 ಯಾಜ 3:7,15ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.

19ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು 10:19 ಅಥವಾ ವಿಶೇಷವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,

20ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, 10:20 ಧರ್ಮೋ 32:17, ಕೀರ್ತ 106:37ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.

2110:21 2 ಕೊರಿ 6:15,16ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.

2210:22 ಧರ್ಮೋ 32:21ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?

23“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.

2410:24 ವ 33 ನೋಡಿರಿಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.

2510:25 1 ಕೊರಿ 8:7:ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.

2610:26 ಕೀರ್ತ 24:1; ಕೀರ್ತ 50:12“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”

27ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.

28ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.

2910:29 1 ಕೊರಿ 8:9-12:ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. 10:29 ರೋಮಾ. 14:16:ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?

30ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?

31ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ 10:31 1 ಕೊರಿ 9:22:ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.

32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.

33ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.

← 1 ಕೊರಿ 9 1 ಕೊರಿ 1 ಕೊರಿ 11 →

1 ಕೊರಿ 10 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ