We Believe JesusFé, Esperança e Nova Vida

1 ಕೊರಿ 8

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← 1 ಕೊರಿ 7 1 ಕೊರಿ 1 ಕೊರಿ 9 →

1ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ 8:1 1 ಕೊರಿ 13:4-13ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.

2ಒಬ್ಬನು ತಾನು 8:2 ಗಲಾ. 6:3; 1 ಕೊರಿ 3:18ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ 8:2 1 ಕೊರಿ 13:8-12ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.

3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.

4ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, 8:4 1 ಕೊರಿ 10:19; ಯೆಶಾ 41:24“ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು 8:4 1 ಕೊರಿ 8:6; ಧರ್ಮೋ 4:35,39; 6:4“ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.

5ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,

68:6 1 ಕೊರಿ 8:4; ಎಫೆ 4:6“ನಮಗಾದರೋ ಒಬ್ಬನೇ ತಂದೆಯಾದ ದೇವರು; 8:6 ರೋಮಾ. 11:36ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, 8:6 ಎಫೆ 4:5ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. 8:6 ಯೋಹಾ 1:3ನಾವೂ ಆತನ ಮುಖಾಂತರ ಉಂಟಾದೆವು.”

7ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, 8:7 ರೋಮಾ. 14:14,22,23ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.

8ಆದರೆ ನಾವು ತಿನ್ನುವ 8:8 ರೋಮಾ. 14:17ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.

98:9 1 ಕೊರಿ 10:23; ರೋಮಾ. 14:21; ಗಲಾ. 5:13ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.

10ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.

11ಹೀಗೆ ಈ ನಿನ್ನ ಜ್ಞಾನದಿಂದ 8:11 ರೋಮಾ. 14:15,20ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.

12ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ 8:12 ಮತ್ತಾ 18:6ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು 8:12 ಮತ್ತಾ 25:45ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.

138:13 ರೋಮಾ. 4:13,21ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.

← 1 ಕೊರಿ 7 1 ಕೊರಿ 1 ಕೊರಿ 9 →

1 ಕೊರಿ 8 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ