We Believe JesusFé, Esperança e Nova Vida

1 ತಿಮೊ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

1 ತಿಮೊ 1 ತಿಮೊ 2 →

1ನಮ್ಮ ರಕ್ಷಕನಾದ ದೇವರ 1:1 ಕೊಲೊ 1:27ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ 1:1 2 ಕೊರಿ 1:1ಅಪೊಸ್ತಲನಾದ ಪೌಲನು

21:2 ತೀತ 1:4ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, 1:2 2 ತಿಮೊ 1:2; 2 ಯೊಹಾ 3; ಯೂದ 2ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.

3ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, 1:3 1 ತಿಮೊ 6:3 ಗಲಾ 1:6,7ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,

41:4 1 ತಿಮೊ 4:7; 2 ತಿಮೊ 4:4; ತೀತ 1:14; 2 ಪೇತ್ರ 1:16ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, 1:4 ತೀತ 3:9ವಂಶಾವಳಿಗಳೂ 1:4 1 ತಿಮೊ. 6:4 ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.

51:5 2 ತಿಮೊ. 2:22ಶುದ್ಧಹೃದಯ, 1:5 1 ಪೇತ್ರ. 3:16, 21ಒಳ್ಳೆಯ ಮನಸ್ಸಾಕ್ಷಿ, 1:5 2 ತಿಮೊ 1:5ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.

6ಕೆಲವರು ಈ ಗುರಿಯನ್ನು ಬಿಟ್ಟು 1:6 ತೀತ 1:10ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ.

7ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, 1:7 1 ತಿಮೊ 6:4; ಕೊಲೊ 2:18ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

81:8 ರೋಮ 7:16ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು.

9ಧರ್ಮಶಾಸ್ತ್ರವು 1:9 ಗಲಾ 5:23ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,

10ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, 1:10 2 ತಿಮೊ 4:3; ತೀತ 1:9; 2:1; 1 ತಿಮೊ 6:3; 2 ತಿಮೊ 1:13; ತೀತ 1:13, 2:2ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.

11ಈ ಬೋಧನೆಯು 1:11 1 ತಿಮೊ 6:15ಭಾಗ್ಯವಂತನಾದ 1:11 2 ಕೊರಿ 4:4ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. 1:11 ತೀತ 1:3,4; ಗಲಾ 2:7ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.

12ಆದರೆ 1:14 ರೋಮ 5:20ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ 1:14 ಲೂಕ 7:47, 50; 1 ಥೆಸ. 1:3ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.

131:15 ಮತ್ತಾ 9:13; ಯೋಹಾ 3:17; ರೋಮ 4:25ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು 1:15 1 ತಿಮೊ 3:1; 4:9; 2 ತಿಮೊ. 2:11; ತೀತ 3:8ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ 1:15 1 ಕೊರಿ 15:9 ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.

14ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.

151:17 ಪ್ರಕ 15:3; 4:9,10ಸರ್ವಯುಗಗಳ ಅರಸನೂ, 1:17 1 ತಿಮೊ 6:15,16; ರೋಮ 1:23ಅಮರನೂ, 1:17 ಯೋಹಾ 1:18; ಕೊಲೊ 1:15; ಇಬ್ರಿ 11:27; 1 ಯೋಹಾ 4:12ಅದೃಶ್ಯನೂ ಆಗಿರುವ 1:17 ಯೂದ 25ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

16ಮಗನಾದ ತಿಮೊಥೆಯನೇ, 1:18 1 ತಿಮೊ 4:14ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, 1:18 1 ಕೊರಿ 9:7; 2 ಕೊರಿ 10:4; 2 ತಿಮೊ 2:3,4ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.

171:19 1 ತಿಮೊ 3:9 ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.

181:20 2 ತಿಮೊ 2:7; ಹುಮೆನಾಯನೂ 1:20 1 ತಿಮೊ 4:14ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ 1:20 ಕೊರಿ 5:5ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

1 ತಿಮೊ 1 ತಿಮೊ 2 →

1 ತಿಮೊ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ