We Believe JesusFé, Esperança e Nova Vida

1 ತಿಮೊ 3

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← 1 ತಿಮೊ 2 1 ತಿಮೊ 1 ತಿಮೊ 4 →

1ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

23:2 ತೀತ 1:6-9ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, 3:2 ವ. 11ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, 3:2 1 ಪೇತ್ರ 4:9ಅತಿಥಿಸತ್ಕಾರಮಾಡುವವನೂ, 3:2 2 ತಿಮೊ 2:24ಬೋಧಿಸಲು ಶಕ್ತನಾಗಿರಬೇಕು.

3ಅವನು ಕುಡಕನು, ಜಗಳವಾಡುವವನೂ ಆಗಿರದೆ, 3:3 ತೀತ 3:2ಸಾತ್ವಿಕನೂ, ಹೊಡೆದಾಡದವನೂ 3:3 1 ತಿಮೊ 6:10; ಇಬ್ರಿ. 13:5ದ್ರವ್ಯಾಶೆಯಿಲ್ಲದವನೂ ಆಗಿರಬೇಕು.

4ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.

53:5 ವ 12ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?

6ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.

7ಇದಲ್ಲದೆ ಅವನು 3:7 ಮಾರ್ಕ 4:11; ಕೊಲೊ 4:5ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು 3:7 2 ತಿಮೊ 2:26; 1 ತಿಮೊ 6:9ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.

8ಅದೇ ರೀತಿಯಾಗಿ 3:8 1 ತಿಮೊ 6:9ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, 3:8 ತೀತ 2:3; 1 ತಿಮೊ 5:23ಮದ್ಯಾಸಕ್ತರೂ, 3:8 ತೀತ 1:7; 1 ಪೇತ್ರ 5:2ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,

9ನಂಬಿಕೆಯಿಂದ ಪ್ರಕಟವಾಗಿರುವ 3:9 1 ತಿಮೊ 1:19ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.

10ಇದಲ್ಲದೆ 3:10 1 ತಿಮೊ 5:22ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.

11ಹಾಗೆಯೇ 3:11 ಅವರ ಹೆಂಡತಿಯರಾದಸಭಾಸೇವಕಿಯರಾದ ಸ್ತ್ರೀಯರೂ 3:11 ತೀತ 2:3ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.

12ಸಭಾಸೇವಕರು ಏಕಪತ್ನಿಯುಳ್ಳವರೂ, 3:12 1 ತಿಮೊ 3:2,4ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.

133:13 ಮತ್ತಾ 25:21ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

14ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

15ಆದರೆ ಒಂದು ವೇಳೆ ನಾನು ತಡಮಾಡಿದರೂ, 3:15 ಎಫೆ 2:21; 2 ತಿಮೊ 2:20; ಇಬ್ರಿ 3:6ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.

16ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ,

← 1 ತಿಮೊ 2 1 ತಿಮೊ 1 ತಿಮೊ 4 →

1 ತಿಮೊ 3 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ