We Believe JesusFé, Esperança e Nova Vida

1 ತಿಮೊ 6

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← 1 ತಿಮೊ 5 1 ತಿಮೊ

1ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, 6:1 ಯೆಶಾ 52:5; ರೋಮಾ. 2:24; ತೀತ 2:5ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.

2ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು 6:2 ಫಿಲಿ. 16ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. 6:2 1 ತಿಮೊ 4:11,13; 5:7ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.

3ಯಾವನಾದರೂ 6:3 1 ತಿಮೊ. 1:3ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ 6:3 1 ತಿಮೊ. 1:10ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,

4ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, 6:4 1 ತಿಮೊ. 1:4; 2 ತಿಮೊ. 2:33; ತೀತ 3:9; ನಿಂದನೆ 6:4 2 ತಿಮೊ. 2:14ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.

5ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು 6:5 ತೀತ 1:11; 2 ಪೇತ್ರ 2:3ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.

6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.

76:7 ಯೋಬ 1:21; ಕೀರ್ತ 49:17; ಪ್ರಸಂಗಿ 5:15,16ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.

86:8 ಜ್ಞಾ. 30:8ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.

96:9 ಜ್ಞಾ. 15:27; 23:4; 28:20; ಮತ್ತಾ 13:22; ಲೂಕ 12:15ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.

106:10 ವಿಮೋ 23:8; ಧರ್ಮೋ 16:19ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

11ಎಲೈ, 6:11 2 ತಿಮೊ. 3:17ದೇವರ ಮನುಷ್ಯನೇ, ನೀನಾದರೋ 6:11 2 ತಿಮೊ. 2:22ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

126:12 ನಂಬಿಕೆಯಕ್ರಿಸ್ತ ನಂಬಿಕೆಯ 6:12 1 ತಿಮೊ. 1:18 ಶ್ರೇಷ್ಠ ಹೋರಾಟವನ್ನು ಮಾಡು, 6:12 ಫಿಲಿ. 3:12ನಿತ್ಯಜೀವವನ್ನು ಹಿಡಿದುಕೋ. 6:12 1 ಪೇತ್ರ 5:10ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.

13ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ 6:13 ಎದುರಿನಲ್ಲಿಕಾಲದಲ್ಲಿ 6:13 ಮತ್ತಾ 27:11; ಯೋಹಾ 18:37; ಪ್ರಕ 1:5; 3:14ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,

14ನಮ್ಮ ಕರ್ತನಾದ ಯೇಸು ಕ್ರಿಸ್ತನ 6:14 2 ಥೆಸ. 2:8ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು.

156:15 1 ತಿಮೊ. 1:11ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, 6:15 ಪ್ರಕ 17:14ರಾಜಾಧಿರಾಜನೂ, ಕರ್ತಾಧಿಕರ್ತನೂ,

166:16 1 ತಿಮೊ. 1:17ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. 6:16 ವಿಮೋ 33:20; ಯೋಹಾ 1:18; 5:37; 6:46; ಕೊಲೊ 1:15; 1 ಯೋಹಾ 4:12, 20ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.

17ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು 6:17 ರೋಮಾ. 11:20; 12:3, 16ಅಹಂಕಾರಿಗಳಾಗಿರದೆ, 6:17 ಜ್ಞಾ. 23:5ಅಸ್ಥಿರವಾದ ಐಶ್ವರ್ಯದ ಮೇಲೆ 6:17 ಮಾರ್ಕ 10:24 ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ 6:17 ಅ. ಕೃ. 14:17ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

18ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, 6:20 2 ತಿಮೊ 2:16ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು 6:20 2 ತಿಮೊ. 1:12,14ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.

19ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. 6:21 ಕೊಲೊ 4:18ಕೃಪೆಯು ನಿಮ್ಮೊಂದಿಗಿರಲಿ.

← 1 ತಿಮೊ 5 1 ತಿಮೊ

1 ತಿಮೊ 6 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ