We Believe JesusFé, Esperança e Nova Vida

2 ಕೊರಿ 13

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← 2 ಕೊರಿ 12 2 ಕೊರಿ

1ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. 13:1 ಧರ್ಮೋ 19:15; ಅರಣ್ಯ 35:30“ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.

2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ 13:2 2 ಕೊರಿ 13:10; 1 ಕೊರಿ 4:21ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: 13:2 2 ಕೊರಿ 12:21ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.

3ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ 13:3 2 ಕೊರಿ 10:4ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.

413:4 ಫಿಲಿ. 2:7,8; 1 ಪೇತ್ರ 3:18ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; 13:4 ರೋಮಾ. 1:4; 6:4ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. 13:4 2 ಕೊರಿ 12:10ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, 13:4 ರೋಮಾ. 6:8ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.

5ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. 13:5 ರೋಮಾ. 8:10; ಗಲಾ. 4:19ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.

6ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.

7ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.

8ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.

913:9 1 ಕೊರಿ 4:10; 2 ಕೊರಿ 4:12; 12:5; 9:10ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.

10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. 13:10 2 ಕೊರಿ 10:8ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ 13:10 2 ಕೊರಿ 2:3ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.

11ಕಡೆಯದಾಗಿ ಸಹೋದರರೇ, 13:11 ನಿಮಗೆ ಕ್ಷೇಮವಾಗಲಿಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, 13:11 ರೋಮಾ. 12:16ಏಕ ಮನಸ್ಸುಳ್ಳವರಾಗಿರಿ, 13:11 ಮಾರ್ಕ 9:50ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, 13:11 ರೋಮಾ. 15:33ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

1213:12 ರೋಮಾ. 16:16ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

1313:13 ಫಿಲಿ. 4:22ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.

1413:14 ರೋಮಾ. 16:20; 1 ಕೊರಿ 16:23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, 13:14 ಯೂದ. 21ದೇವರ ಪ್ರೀತಿಯೂ, 13:14 ಫಿಲಿ. 2:1ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.

← 2 ಕೊರಿ 12 2 ಕೊರಿ

2 ಕೊರಿ 13 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ