We Believe JesusFé, Esperança e Nova Vida

2 ಕೊರಿ 2

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← 2 ಕೊರಿ 1 2 ಕೊರಿ 2 ಕೊರಿ 3 →

1ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.

2ನಾನೇ ನಿಮ್ಮನ್ನು ದುಃಖಪಡಿಸಿದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ?

3ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು 2:3 2 ಕೊರಿ 7:16ನಂಬಿದ್ದೇನೆ.

4ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ 2:4 2 ಕೊರಿ 7:8-12ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.

5ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ.

6ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ 2:6 1 ಕೊರಿ 5:4-5, 2 ಕೊರಿ 7:11ಆ ಶಿಕ್ಷೆಯೇ ಸಾಕು.

72:7 ಗಲಾ. 6:1, ಎಫೆ 4:32ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.

8ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

92:9 2 ಕೊರಿ 7:15, 10:6ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.

10ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.

11ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. 2:11 1 ಪೇತ್ರ. 5:8ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.

12ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ 2:12 ಅ. ಕೃ. 16:8, 20:6ನಾನು ತ್ರೋವ ಪಟ್ಟಣಕ್ಕೆ ಬಂದೆನು.

13ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ 2:13 2 ಕೊರಿ 7:5ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.

14ಕ್ರಿಸ್ತನ ಮುಖಾಂತರ ನಮ್ಮನ್ನು 2:14 ಕೊಲೊ 2:15ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ 2:14 ಎಫೆ 5:2, ಫಿಲಿ. 4:18ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.

15ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು 2:15 2 ಕೊರಿ 4:3ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.

162:16 ಲೂಕ 2:34, ಯೋಹಾ 9:39, 1 ಪೇತ್ರ. 2:7-8ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. 2:16 2 ಕೊರಿ 3:5-6ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?

17ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.

← 2 ಕೊರಿ 1 2 ಕೊರಿ 2 ಕೊರಿ 3 →

2 ಕೊರಿ 2 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ