1ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ 1:1 ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ. ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;
2ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು 1:2 3 ಯೋಹಾ 1; 1 ಯೋಹಾ 3:18:ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, 1:2 ಯೋಹಾ 1:17; 14:6:ಸತ್ಯವನ್ನು 1:2 ಯೋಹಾ 8:32; 1 ತಿಮೊ. 2:4:ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
31:3 1 ತಿಮೊ. 1:2; ಯೂದ 2:ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.
4ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು 1:4 3 ಯೋಹಾ 3,4:ಬಹಳ ಸಂತೋಷಪಟ್ಟೆನು.
5ಅಮ್ಮನವರೇ, 1:5 1 ಯೋಹಾ 2:7:ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು 1:5 1 ಯೋಹಾ 2:8; 3:11:ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
61:6 1 ಯೋಹಾ 5:3:ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, 1:6 1 ಯೋಹಾ 2:24:ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
7ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ 1:7 ಮೂಲ: ಬರುವ. 1 ಯೋಹಾ 2:22; 4:2,3:ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ 1:7 1 ಯೋಹಾ 2:18,26; 4:1:ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
81:8 ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, 1:8 ಗಲಾ. 3:4; ಇಬ್ರಿ. 10:35:ಕಳೆದುಕೊಳ್ಳದೆ 1:8 1 ಕೊರಿ 3:8:ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
9ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ1:9 1 ಯೋಹಾ 2:23:. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.
10ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ 1:10 ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10:ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.
11ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
12ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, 1:12 3 ಯೋಹಾ 14:ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. 1:12 ಯೋಹಾ 15:11; 17:13; 1 ಯೋಹಾ 1:4:ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.
13ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.