We Believe JesusFé, Esperança e Nova Vida

2 ಪೇತ್ರ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

2 ಪೇತ್ರ 2 ಪೇತ್ರ 2 →

1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು 1:1 ರೋಮಾ. 3:21-26:ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ 1:1 ರೋಮಾ. 1:12; ತೀತ. 1:4:ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,

2ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ 1:2 2 ಪೇತ್ರ. 1:3,8; 2:20; 3:18. ಯೋಹಾ 173; ಫಿಲಿ. 3:8:ಪರಿಜ್ಞಾನದಲ್ಲಿ ನಿಮಗೆ 1:2 1 ಪೇತ್ರ. 1:2; ಯೂದ. 2:ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.

3ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ 1:3 1 ಥೆಸ. 2:12; 2 ಥೆಸ. 2:14; 2 ತಿಮೊ. 1:9; 1 ಪೇತ್ರ. 5:10:ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.

4ನೀವು ಲೋಕದಲ್ಲಿ 1:4 2 ಪೇತ್ರ. 2:18,20:ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ 1:4 ಎಫೆ 4:24; ಇಬ್ರಿ. 12:10; 1 ಯೋಹಾ 3:2:ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.

5ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ 1:5 ಫಿಲಿ. 4:8:ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,

6ಜ್ಞಾನಕ್ಕೆ 1:6 ಅ. ಕೃ. 24:25; ಗಲಾ. 5:22-23:ದಮೆಯನ್ನೂ, ದಮೆಗೆ 1:6 ಇಬ್ರಿ. 10:36; ಯಾಕೋಬ. 1:3; ತಾಳ್ಮೆಯನ್ನೂ,

7ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ 1:7 ಇಬ್ರಿ. 13:1:ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ 1:7 1 ಕೊರಿ 13; 1 ಯೋಹಾ 4:16:ಪ್ರೀತಿಯನ್ನೂ ಕೂಡಿಸಿರಿ.

8ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, 1:8 ಯೋಹಾ 15:2; ತೀತ. 3:14:ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.

9ಇವುಗಳಿಲ್ಲದವನು 1:9 ಯೋಬ. 5:14; 12:25; ಚೆಫ. 1:17; ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ 1:9 ಎಫೆ 5:26; ತೀತ. 2:14; 1 ಯೋಹಾ 1:7; ಪ್ರಕ 7:14:ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.

10ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, 1:10 1 ಥೆಸ. 1:4:ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ 1:10 ಫಿಲಿ. 2:12; ಇಬ್ರಿ. 3:14:ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.

11ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ 1:11 ಕೊಲೊ 1:13; ಅ. ಕೃ. 14:22:ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.

12ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ 1:12 2 ಯೋಹಾ 2:ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ 1:12 ಯೂದ. 5. ಫಿಲಿ. 3:1:ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.

13ನಾನು 1:13 2 ಕೊರಿ 5:1,4:ನನ್ನ ದೇಹವೆಂಬ ಗುಡಾರದಲ್ಲಿರುವ ತನಕ 1:13 2 ಪೇತ್ರ. 3:1:ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.

14ಏಕೆಂದರೆ 1:14 ಯೋಹಾ 21:18,19:ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು 1:14 2 ತಿಮೊ. 4:6:ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.

15ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.

16ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, 1:16 1 ಥೆಸ. 2:19:ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ 1:16 1 ಕೊರಿ 1:17:ಚಮತ್ಕಾರದಿಂದ ಕಲ್ಪಿಸಿದ 1:16 1 ತಿಮೊ. 1:4:ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. 1:16 ಮತ್ತಾ 17:1,2,6; ಮಾರ್ಕ 9:2; ಯೋಹಾ 1:14:ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.

17ಏಕೆಂದರೆ, 1:17 ಮತ್ತಾ 17:5; 3:17; ಲೂಕ 9:35:“ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.

18ನಾವು 1:18 ವಿಮೋ 3:5; ಯೆಹೋ. 5:15:ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು.

19ಇದಲ್ಲದೆ 1:19 1 ಪೇತ್ರ. 1:10:ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು 1:19 ಅಥವಾ, ಸೂರ್ಯನು, ದಿವಾಕರನು; ಮಲಾ. 4:2; ಪ್ರಕ 2:28; 22:16:ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ 1:19 ಕೀರ್ತ 119:105; ಯೋಹಾ 5:35:ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.

20ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.

21ಏಕೆಂದರೆ 1:21 2 ತಿಮೊ. 3:16:ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು 1:21 1 ಪೇತ್ರ. 1:11; 2 ಸಮು 23:2; ಅ. ಕೃ. 1:16; ಯಾಕೋಬ. 5:10:ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.

2 ಪೇತ್ರ 2 ಪೇತ್ರ 2 →

2 ಪೇತ್ರ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ