We Believe JesusFé, Esperança e Nova Vida

2 ತಿಮೊ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

2 ತಿಮೊ 2 ತಿಮೊ 2 →

1ಕ್ರಿಸ್ತಯೇಸುವಿನಲ್ಲಿರುವ 1:1 ತೀತ. 1:2; ಇಬ್ರಿ. 9:15ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ 1:1 1 ಕೊರಿ 1:1ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ 1:1 2 ಕೊರಿ 1:1ಅಪೊಸ್ತಲನಾದ ಪೌಲನು,

21:2 1 ಕೊರಿ 4:17, 2 ತಿಮೊ. 2:1; ಅ. ಕೃ. 16:1ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, 1:2 1 ತಿಮೊ. 1:2ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.

3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ 1:3 ಅ. ಕೃ. 22:3; 24:14ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. 1:3 1 ತಿಮೊ. 3:9; ಅ. ಕೃ. 23:1ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ 1:3 ರೋಮಾ. 1:8ಸ್ತೋತ್ರಸಲ್ಲಿಸುತ್ತೇನೆ.

4ನಾನು 1:4 ಅ. ಕೃ. 20:37ನಿನ್ನ ಕಣ್ಣೀರನ್ನು ನೆನಪಿಗೆ ತಂದು 1:4 ಫಿಲಿ. 1:8ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.

5ನಿನ್ನಲ್ಲಿರುವ 1:5 1 ತಿಮೊ. 1:5 ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ 1:5 ಅ. ಕೃ. 16:1; 1 ತಿಮೊ. 3:15ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.

6ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ 1:6 1 ತಿಮೊ. 4:14, 1 ಥೆಸ. 5:19ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.

7ದೇವರು ನಮಗೆ ಕೊಟ್ಟಿರುವ ಆತ್ಮವು 1:7 ಲೂಕ 24:49; ಅ. ಕೃ. 1:8ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು 1:7 ರೋಮಾ. 8:15; ಯೋಹಾ 14:27; ಪ್ರಕ 21:8ಹೇಡಿತನದ ಆತ್ಮವಲ್ಲ.

8ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ 1:8 1 ಕೊರಿ 1:6ಸಾಕ್ಷಿಯ ವಿಷಯದಲ್ಲಾಗಲಿ ಆತನ 1:8 2 ತಿಮೊ. 1:16; ಎಫೆ 3:1ಸೆರೆಯವನಾದ ನನ್ನ ವಿಷಯದಲ್ಲಾಗಲಿ 1:8 ರೋಮಾ. 1:16; ಇಬ್ರಿ. 11:16; 1 ಯೋಹಾ 2:28ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ 1:8 2 ತಿಮೊ. 2:3,9; 4:5ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.

91:9 ತೀತ. 3:5, ರೋಮಾ. 3:27ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, 1:9 ಇಬ್ರಿ. 3:11; ರೋಮಾ. 8:28ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ 1:9 1 ತಿಮೊ. 1:1; ತೀತ. 3:4ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು 1:9 ತೀತ. 1:2, ರೋಮಾ. 16:25; ಎಫೆ 1:4ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,

10ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ 1:10 2 ಥೆಸ. 2:8ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. 1:10 1 ಕೊರಿ 15:26, 54, 55; ಇಬ್ರಿ. 2:14,15ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.

11ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.

121:12 2 ತಿಮೊ. 2:9ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. 1:12 1 ಪೇತ್ರ 4:19ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು 1:12 ನಾನು ಆತನಆತನು 1:12 2 ತಿಮೊ. 1:18; 4:8; 1 ಕೊರಿ 3:13ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

13ನೀನು 1:13 1 ತಿಮೊ. 1:14ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ 1:13 1 ತಿಮೊ. 1:10ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.

141:14 1 ತಿಮೊ. 6:20ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು 1:14 ರೋಮ. 8:9ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.

15ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.

161:16 2 ತಿಮೊ. 4:19ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. 1:16 ವ. 8; ಅ. ಕೃ. 28:20ನನ್ನ ಬೇಡಿಗಳಿಗೆ ನಾಚಿಕೆಪಡದೆ,

17ರೋಮಾಪುರಕ್ಕೆ ಬಂದಕೂಡಲೆ 1:17 ಮತ್ತಾ 25:36-40ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು.

18ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

2 ತಿಮೊ 2 ತಿಮೊ 2 →

2 ತಿಮೊ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ