1ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ 2:1 ಎಫೆ 6:10ಬಲಹೊಂದಿದವನಾಗು.
2ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು 2:2 ತೀತ 1:5ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
32:3 1 ತಿಮೊ 1:18; 2 ತಿಮೊ. 1:; 4:5ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.
4ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.
5ಇದಲ್ಲದೆ 2:5 1 ಕೊರಿ 9:25ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ 2:5 2 ತಿಮೊ. 4:8ಜಯಮಾಲೆಯು ದೊರಕುವುದಿಲ್ಲ.
62:6 1 ಕೊರಿ 9:10; ಇಬ್ರಿ. 6:7; ಯಾಕೋಬ 5:7ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.
7ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.
82:8 ದಾವೀದನ ವಂಶದವನಾದ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂಬುದನ್ನು ಜ್ಞಾಪಕಮಾಡಿಕೋ; 1 ಕೊರಿ 15:20ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ 2:8 ಮತ್ತಾ 1:1ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, 2:8 ರೋಮಾ. 2:16ಇದೇ ನಾನು ಸಾರುವ ಸುವಾರ್ತೆ.
9ಇದರಲ್ಲಿ 2:9 2 ತಿಮೊ. 1:8, 12ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ 2:9 ಫಿಲಿ. 1:7ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. 2:9 2 ತಿಮೊ. 4:17; ಫಿಲಿ 1:13ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
10ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು 2:10 1 ಪೇತ್ರ 5:10ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು 2:10 ಎಫೆ 3:13; ಕೊಲೊ 1:24; 1 ಕೊರಿ 3:7ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.
112:11 1 ತಿಮೊ. 1:15ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ
12ಸಹಿಸಿಕೊಳ್ಳುವವರಾಗಿದ್ದರೆ
13ನಾವು ಅಪನಂಬಿಗಸ್ತರಾಗಿದ್ದರೂ
14ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ 2:14 1 ತಿಮೊ. 6:4; ವ. 23ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.
15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
162:16 1 ತಿಮೊ. 6:20ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ 2:16 ತೀತ 3:9ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.
17ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ 2:17 1 ತಿಮೊ. 1:20ಹುಮೆನಾಯನೂ ಪಿಲೇತನೂ ಇದ್ದಾರೆ.
18ಅವರು ಸತ್ಯಭ್ರಷ್ಟರಾಗಿ 2:18 1 ಕೊರಿ 15:12ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
19ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ 2:19 ಅರಣ್ಯ 16:5; ನಹೂ. 1:7; ಯೋಹಾ 10:14, 27; 1 ಕೊರಿ 8:3“ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.
20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ 2:20 ರೋಮಾ. 9:21ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.
212:21 ಜ್ಞಾ. 25:4; ಯೆಶಾ 52:11ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, 2:21 2 ತಿಮೊ. 3:17; ತೀತ 3:1ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.
22ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
232:23 1 ತಿಮೊ. 6:4ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
242:24 ಮತ್ತಾ 12:18ಕರ್ತನ ಸೇವಕನು ಜಗಳವಾಡದೆ, 2:24 1 ಥೆಸ. 2:7ಎಲ್ಲರ ವಿಷಯದಲ್ಲಿ ಸಾಧುವೂ, 2:24 1 ತಿಮೊ. 3:2ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ
25ಎದುರಿಸುವವರನ್ನು 2:25 ಗಲಾತ್ಯ. 6:1; ತೀತ 3:2ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. 2:25 ಅ. ಕೃ. 8:22ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ 2:25 1 ತಿಮೊ. 2:4ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
262:26 1 ತಿಮೊ. 3:7ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.