1ಆದರೆ 3:1 1 ತಿಮೊ 4:1ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.
2ಮನುಷ್ಯರು 3:2 ಫಿಲಿ 2:21ಸ್ವಾರ್ಥಚಿಂತಕರೂ, 3:2 ಲೂಕ 16:14; 1 ತಿಮೊ 6:10ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
33:3 ರೋಮಾ. 1:31ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, 3:3 ತೀತ 1:8ಒಳ್ಳೆಯದನ್ನು ದ್ವೇಷಿಸುವವರೂ,
4ದ್ರೋಹಿಗಳೂ, ದುಡುಕುವವರೂ, 3:4 1 ತಿಮೊ 3:6; 6:4ದುರಹಂಕಾರವುಳ್ಳವರೂ, 3:4 ಫಿಲಿ 3:19ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,
5ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
6ಅವರಲ್ಲಿ ಕೆಲವರು 3:6 ತೀತ 1:11ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.
7ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ 3:7 1 ತಿಮೊ 2:4ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.
83:8 ವಿಮೋ 7:11ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.
9ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. 3:9 ವಿಮೋ 7:12; 8:18; 9:11ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು.
10ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,
113:11 ಅ. ಕೃ 13:14; 45, 50ಅಂತಿಯೋಕ್ಯ, 3:11 ಅ. ಕೃ 14:1,2,5ಇಕೋನ್ಯ, 3:11 ಅ. ಕೃ 14:6,19ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, 3:11 ಕೀರ್ತ 34:19ಅವೆಲ್ಲವುಗಳೊಳಗಿನಿಂದ 3:11 2 ತಿಮೊ 4:17ಕರ್ತನು ನನ್ನನ್ನು ಬಿಡಿಸಿದನು.
123:12 ಅ. ಕೃ 14:22ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
13ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ 3:13 ಪ್ರಕ 22:11ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
143:14 2 ತಿಮೊ 1:13ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.
153:15 2 ತಿಮೊ 1:5ಚಿಕ್ಕಂದಿನಿಂದಲೂ ನಿನಗೆ 3:15 ಯೋಹಾ 5:39ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ 3:15 ಕೀರ್ತ 119:99ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.
16ದೈವ ಪ್ರೇರಿತವಾದ 3:16 ರೋಮ 15:4; 2 ಪೇತ್ರ 1:20,21ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.
17ಆದ್ದರಿಂದ 3:17 1 ತಿಮೊ 6:11ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.