1ಕಡೆಯದಾಗಿ, 3:1 1 ಥೆಸ. 5:25:ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ 3:1 ಕೀರ್ತ 147:15; 1 ಥೆಸ. 1:8:ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
23:2 ರೋಮಾ. 15:31:ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.
3ಆದರೆ 3:3 1 ಕೊರಿ 1:9:ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು 3:3 1 ಯೋಹಾ 2:14:ಕೆಡುಕನ ಕೈಗೆ 3:3 ಮತ್ತಾ 6:13; ಯೋಹಾ 17:15:ಸಿಕ್ಕದಂತೆ ಕಾಪಾಡುವನು.
4ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.
5ನೀವು ದೇವರ ಪ್ರೀತಿಯಲ್ಲಿಯೂ 3:5 ಅಥವಾ, ಕ್ರಿಸ್ತನನ್ನು ಎದುರುನೋಡುವ. ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
6ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ 3:6 ವ. 11; 1 ಥೆಸ. 5:14:ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ 3:6 1 ಕೊರಿ 5:11:ಸಹೋದರನಿಂದ ನೀವು 3:6 ವ. 14; ಮತ್ತಾ 18:17; 2 ತಿಮೊ. 3:5; 1 ಕೊರಿ 5:9; 2 ಯೋಹಾ 10:ದೂರವಾಗಿರಬೇಕೆಂದು 3:6 1 ಕೊರಿ 5:4:ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
73:7 ಅ. ಕೃ. 20:35; 1 ಥೆಸ. 1:6:ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, 3:7 1 ಥೆಸ. 1:5 ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
8ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, 3:8 1 ಥೆಸ. 2:9:ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
93:9 1 ಕೊರಿ 9:4; 1 ಥೆಸ. 2:6:ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, 3:9 ವ. 7; 1 ಪೇತ್ರ. 5:3:ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.
10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, 3:10 ಆದಿ 3:19; 1 ಥೆಸ. 4:11:“ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
11ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, 3:11 1 ತಿಮೊ. 5:13; 1 ಪೇತ್ರ. 4:15:ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.
12ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
13ಸಹೋದರರೇ, 3:13 ಗಲಾ. 6:9; 1 ಕೊರಿ 15:58:ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
14ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ 3:14 ವ. 6:ಅವನ ಸಹವಾಸದಲ್ಲಿ ಸೇರಬೇಡಿರಿ.
15ಆದರೂ 3:15 ಯಾಜಕ. 19:17; ಮತ್ತಾ 18:15:ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.
16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ 3:16 ಅರಣ್ಯ 6:26:ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
17ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.
18ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.