We Believe JesusFé, Esperança e Nova Vida

ಹಗ್ಗಾ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

ಹಗ್ಗಾ ಹಗ್ಗಾ 2 →

1ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.

2ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.

3ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು,

4“ಈ ನನ್ನ ಆಲಯವು ಹಾಳು ಬಿದ್ದಿರುವಾಗ,

5ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ,

6ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು,

7ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ;

8ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ;

9ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು;

10ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;

11ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ,

12ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ1:12 ಇಸ್ರಾಯೇಲ್ ಜನಶೇಷ ಬಾಬಿಲೋನಿನ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರಾಯೇಲ್ ಜನರು., ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.

13ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”

14ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,

15ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.

ಹಗ್ಗಾ ಹಗ್ಗಾ 2 →

ಹಗ್ಗಾ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ