We Believe JesusFé, Esperança e Nova Vida

ಪ್ರಕ 13

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಪ್ರಕ 12 ಪ್ರಕ ಪ್ರಕ 14 →

1ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. 13:1 ಪ್ರಕ 12:3:ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ 13:1 ಪ್ರಕ 17:3:ದೇವದೂಷಣೆಯ ನಾಮಗಳೂ ಇದ್ದವು.

2ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. 13:2 ಪ್ರಕ 13:4, 11; ಲೂಕ 4:6:ಅದಕ್ಕೆ ಘಟಸರ್ಪನು ಶಕ್ತಿಯನ್ನೂ, 13:2 ಪ್ರಕ 16:10:ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.

3ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, 13:3 ಪ್ರಕ 17:8:ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.

4ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, 13:4 ಪ್ರಕ 18:18:“ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.

5ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು 13:5 ಪ್ರಕ 11:2; 12:6:ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.

6ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.

713:7 ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇಲ್ಲ. ಇದಲ್ಲದೆ ದೇವಜನರ ಮೇಲೆ 13:7 ದಾನಿ. 7:21; ಪ್ರಕ 11:7; 12:17:ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

813:8 ಅ. ಕೃ. 2:23; 1 ಪೇತ್ರ. 1:19, 20:ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ 13:8 ಪ್ರಕ 3:5:ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ 13:8 ಪ್ರಕ 3:10:ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.

9ಕಿವಿಯುಳ್ಳವನು ಕೇಳಲಿ,

1013:10 ಯೆಶಾ 33:1; ಯೆರೆ 15:2; 43:11:ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, 13:10 ಆದಿ 9:6; ಮತ್ತಾ 26:52:ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. 13:10 ಪ್ರಕ 14:12:ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.

11ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ 13:11 ಮೂಲ. ಕುರಿಮರಿಗಿರುವಂತೆ. ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.

12ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ 13:12 ವ. 9:ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.

13ಇದು ಜನರ ಮುಂದೆ 13:13 ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54:ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,

14ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು 13:14 ಪ್ರಕ 12:9:ಮರಳುಗೊಳಿಸಿತ್ತು. ಅವರಿಗೆ, 13:14 ಪ್ರಕ 13:3, 12:ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.

15ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, 13:15 ಪ್ರಕ 14:9, 11; 16:2; 19:20; 20:4:ತನ್ನನ್ನು ಆರಾಧಿಸದವರೆಲ್ಲರಿಗೂ 13:15 ಪ್ರಕ 16:6:ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.

16ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ 13:16 ಪ್ರಕ 7:3; ಗಲಾ. 6:17:ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.

17ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ 13:17 ಪ್ರಕ 14:11:ಮೊದಲನೆಯ ಮೃಗದ ಹೆಸರು ಅಥವಾ 13:17 ಪ್ರಕ 15:2:ಅದರ ಹೆಸರನ್ನು ಸೂಚಿಸುವ ಸಂಖ್ಯೆ.

18ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.

← ಪ್ರಕ 12 ಪ್ರಕ ಪ್ರಕ 14 →

ಪ್ರಕ 13 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ