We Believe JesusFé, Esperança e Nova Vida

ಪ್ರಕ 19

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಪ್ರಕ 18 ಪ್ರಕ ಪ್ರಕ 20 →

1ಇದಾದ ಮೇಲೆ 19:1 ಪ್ರಕ 11:15:ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “19:1 ಅಂದರೆ. ಕರ್ತನನ್ನು ಸ್ತುತಿಸಿರಿ; ಕೀರ್ತ 105:45; 106:1:ಹಲ್ಲೆಲೂಯಾ. 19:1 ಅಥವಾ, ರಕ್ಷಣೆಯೂ. ರಕ್ಷಣೆಯೂ, 19:1 ಪ್ರಕ 4:11; 7:10; 12:10:ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.

219:2 ಪ್ರಕ 15:3; 16:7:ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ 19:2 ಪ್ರಕ 17:1:ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ 19:2 ಧರ್ಮೋ 32:43; 2 ಅರಸು. 9:7; ಪ್ರಕ 6:10; 16:6:ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,

3ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, 19:3 ಯೆಶಾ 34:10; ಪ್ರಕ 18:9, 18; ಪ್ರಕ 14:11:ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.

4ಆಗ 19:4 ಪ್ರಕ 4:4, 6, 10; 5:14:ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, 19:4 ಅಂದರೆ, ತಥಾಸ್ತು, ಹಾಗೆಯೇ ಆಗಲಿ. “ಆಮೆನ್, ಹಲ್ಲೆಲೂಯಾ” ಎಂದರು.

5ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು 19:5 ಕೀರ್ತ 22:23; 113:1; 134:1; 135:1:ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.

6ತರುವಾಯ 19:6 ವ. 1; ದಾನಿ. 10:6:ಬಹುದೊಡ್ಡ ಜನರ ಸಮೂಹದ ಶಬ್ದವು 19:6 ಪ್ರಕ 1:15:ಜಲಪ್ರವಾಹದ ಘೋಷದಂತೆಯೂ 19:6 ಪ್ರಕ 6:1; 14:2; ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು 19:6 ಕೀರ್ತ 97:1; ಪ್ರಕ 11:15, 17:ಆಳುತ್ತಾನೆ.

719:7 ಮತ್ತಾ 22:2; 25:10; ಲೂಕ 12:36; 14:8; ಎಫೆ 5:22-32:ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು 19:7 ಪ್ರಕ 21:2, 9; ಯೆಶಾ 54:5, 6; ಹೋಶೇ. 2:19, 20:ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.

819:8 ಕೀರ್ತ 45:13-15; ಯೆಹೆ. 16:10:ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ 19:8 ಕೀರ್ತ 132:9; ಯೆಶಾ 61:10:ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).

9ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, 19:9 ವ. 7; ಲೂಕ 14:15:“ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, 19:9 ಪ್ರಕ 21:5; 22:6:“ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.

10ಆಗ 19:10 ಪ್ರಕ 22:8:ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು 19:10 ಪ್ರಕ 22:9; ಅ. ಕೃ. 10:26; 14:15:ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, 19:10 ಪ್ರಕ 1:2; 6:9; 12:17:ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ 19:10 ಅಥವಾ, ನಮಸ್ಕಾರಮಾಡು; ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿಸುವ ಆತ್ಮನು ಪ್ರವಾದನೆಯನ್ನು ಹೇಳಿಸುವ ಆತ್ಮನೇ ಅಂದನು. ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.

11ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, 19:11 ಪ್ರಕ 6:2:ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ 19:11 ಪ್ರಕ 3:7, 14 ನಂಬಿಗಸ್ತನು, ಸತ್ಯವಂತನು ಎಂದು ಹೆಸರು. 19:11 ಕೀರ್ತ 96:13; ಯೆಶಾ 11:4:ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.

1219:12 ಪ್ರಕ 1:14; 2:18:ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ 19:12 ಪ್ರಕ 12:3:ಅನೇಕ ಕಿರೀಟಗಳುಂಟು, 19:12 ವ. 16:ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, 19:12 ಪ್ರಕ 2:17:ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.

13ಆತನು 19:13 ಯೆಶಾ 63:2,3.ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. 19:13 ಯೋಹಾ 1:1-18:ಆತನಿಗೆ ದೇವರ ವಾಕ್ಯವೆಂದು ಹೆಸರು.

14ಪರಲೋಕದಲ್ಲಿರುವ ಸೈನ್ಯವು 19:14 ಪ್ರಕ 3:4; 7:9:ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.

1519:15 ಯೆಶಾ 11:4; 2 ಥೆಸ. 2:8; ಇಬ್ರಿ. 4:12:ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. 19:15 ಕೀರ್ತ 2:9; ಪ್ರಕ 2:27; 12:5:ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. 19:15 ಯೆಶಾ 63:3; ಪ್ರಕ 14:20:ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

16ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “19:16 ಪ್ರಕ 17:14:ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ 19:16 ವ. 12:ಹೆಸರು ಬರೆದಿದೆ.

17ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ 19:17 ವ. 21:ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, 19:17 ಯೆಶಾ 34:6; ಯೆರೆ 12:9; 46:10; ಯೆಹೆ. 39:17-20:ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,

18ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.

19ತರುವಾಯ 19:19 ಪ್ರಕ 11:7; 13:1:ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ 19:19 ಪ್ರಕ 16:14, 16:ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.

20ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ 19:20 ಪ್ರಕ 13:11-17; 16:13:ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ 19:20 ಪ್ರಕ 13:15:ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ 19:20 ಆದಿ 19:24; ಪ್ರಕ 14:10; 21:8; 2 ಥೆಸ. 1:8:ಗಂಧಕದಿಂದ ಉರಿಯುವ 19:20 ಪ್ರಕ 20:10, 14, 15; ದಾನಿ. 7:11:ಬೆಂಕಿಯ ಕೆರೆಗೆ ಹಾಕಲಾಯಿತು.

21ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ 19:21 ವ. 15:ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, 19:21 ವ. 17:ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.

← ಪ್ರಕ 18 ಪ್ರಕ ಪ್ರಕ 20 →

ಪ್ರಕ 19 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ