1ಆಗ ಒಬ್ಬ ದೇವದೂತನು 20:1 ಪ್ರಕ 9:1:ಅಧೋಲೋಕದ 20:1 ಪ್ರಕ 1 18:ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.
2ಅವನು ಪಿಶಾಚಿಯೂ ಸೈತಾನನೂ ಆಗಿರುವ 20:2 ಪ್ರಕ 12:9:ಪುರಾತನ ಸರ್ಪವೆಂಬ ಘಟಸರ್ಪವನ್ನು 20:2 2 ಪೇತ್ರ. 2:4; ಯೂದ 6:ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
3ಆ ಸಾವಿರ ವರ್ಷ ಮುಗಿಯುವ ತನಕ 20:3 ಪ್ರಕ 20:8, 10ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು 20:3 ಪ್ರಕ 9:1:ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ 20:3 ದಾನಿ. 6:17; ಮತ್ತಾ 27:66:ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.
4ತರುವಾಯ ಸಿಂಹಾಸನಗಳನ್ನು ಕಂಡೆನು. 20:4 ಪ್ರಕ 3:21:ಅವುಗಳ ಮೇಲೆ ಕುಳಿತಿದ್ದವರಿಗೆ 20:4 ದಾನಿ. 7:22; 1 ಕೊರಿ 6:2,3:ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ 20:4 ಪ್ರಕ 6:9:ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ 20:4 ಪ್ರಕ 13:12, 14-16:ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. 20:4 ಯೋಹಾ 14:19; 2 ತಿಮೊ. 2:11:ಅವರು ಪುನಃ ಜೀವಿತರಾಗಿ ಎದ್ದು 20:4 ದಾನಿ. 7:18; ಮತ್ತಾ 20:21; 2 ತಿಮೊ. 2:12:ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
5ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.
620:6 ಪ್ರಕ 14:13; 19:9:ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. 20:6 ಮತ್ತಾ 10:28:ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ 20:6 ಯೆಶಾ 61:6:ಯಾಜಕರಾಗಿ 20:6 ವ. 4:ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
7ಆ ಸಾವಿರ ವರ್ಷಗಳು ಮುಗಿದ ಮೇಲೆ 20:7 ಪ್ರಕ 20:2, 3:ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.
8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, 20:8 ಯೆಹೆ. 38:2, 16; 39:1:ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ 20:8 ಪ್ರಕ 16:14:ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.
9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ 20:9 ಯೆಹೆ. 39:6:ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.
10ಇದಲ್ಲದೆ 20:10 ಪ್ರಕ 20:3, 8:ಅವರನ್ನು ಮೋಸಗೊಳಿಸಿದ ಪಿಶಾಚನು 20:10 ಪ್ರಕ 19:2, 3:ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ 20:10 ಪ್ರಕ 16:13:ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.
11ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. 20:11 ಕೀರ್ತ 102:26:ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.
12ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ 20:12 ದಾನಿ. 7:10:ಪುಸ್ತಕಗಳು ತೆರೆಯಲ್ಪಟ್ಟವು. 20:12 ಲೂಕ 10:20; ಫಿಲಿ. 4:3:ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, 20:12 ರೋಮಾ. 14:10; 2 ಕೊರಿ 5:10:ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. 20:13 ಪ್ರಕ 6:8:ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
14ಆ ಮೇಲೆ ಮೃತ್ಯುವೂ ಪಾತಾಳವೂ 20:14 ಲೂಕ 20:36; 1 ಕೊರಿ 15:26; ಪ್ರಕ 21:4:ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. 20:14 ವ. 6:ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.
15ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ 20:15 ಮತ್ತಾ 13:42, 50. ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.