1ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.
2ಪ್ರಸಂಗಿಯು ಹೀಗೆ ಹೇಳುತ್ತಾನೆ.
3ಈ ಲೋಕದಲ್ಲಿ1:3 ಈ ಲೋಕದಲ್ಲಿ ಅಥವಾ ಸೂರ್ಯನ ಕೆಳಗೆ. ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು?
4ಒಂದು ಸಂತತಿಯು ಹೋಗುವುದು,
5ಸೂರ್ಯನು ಉದಯಿಸುತ್ತಾನೆ.
6ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ.
7ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ.
8ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ.
9ಇದ್ದದ್ದೇ ಇರುವುದು,
10‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ?
11ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ.
12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.
13ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
14ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ1:14 ಗಾಳಿಯನ್ನು ಹಿಂದಟ್ಟುವ ಅಥವಾ ಗಾಳಿಯನ್ನು ತಿನ್ನುವ ಹಾಗೆ. ಹಾಗೆ ಸಮಸ್ತವೂ ವ್ಯರ್ಥ.
15ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ!
16ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.
17ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.
18ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.