We Believe JesusFé, Esperança e Nova Vida

ಪ್ರಸ 4

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಪ್ರಸ 3 ಪ್ರಸ ಪ್ರಸ 5 →

1ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು.

2ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.

3ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ,

4ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

5ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ,

6ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ

7ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.

8ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ.

9ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು.

10ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು.

11ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ,

12ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ

13ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.

14ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

15ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು.

16ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.

← ಪ್ರಸ 3 ಪ್ರಸ ಪ್ರಸ 5 →

ಪ್ರಸ 4 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ