1ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು.
2ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು;
3ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು.
4ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ;
5ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.
6ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ?
7ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ.
8ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ
9ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.
10ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ
11ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ,
12ಯಾವ ಅನ್ಯದೇವರೂ ಇಲ್ಲ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದನು.
13ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ
14ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು,
15ಆದರೆ 32:15 ಯಥಾರ್ಥತೆಯುಳ್ಳವನು.ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ,
16ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು;
17ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ
18ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ;
19ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು;
20ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು,
21ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು.
22ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ
23ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು;
24ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು;
25ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು.
26ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು,
27ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು,
28ಅವರು ವಿವೇಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ.
29ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!
30ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ
31ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ.
32ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ;
33ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು.
34ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ?
35ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ;
36ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು.
37ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ,
38ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು
39ನಾನೇ, ನಾನೊಬ್ಬನೇ ದೇವರಾಗಿರಲಾಗಿ
40ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ
41‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ,
42ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು;
43ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ.
44ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.”
45ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ಹೇಳಿ ಮುಗಿಸಿದ ನಂತರ,
46ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.
47ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.
48ಆದೇ ದಿನ ಯೆಹೋವನು ಮೋಶೆಗೆ,
49“ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.
50ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.
51ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.
52ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು.