We Believe JesusFé, Esperança e Nova Vida

ವಿಮೋ 15

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ವಿಮೋ 14 ವಿಮೋ ವಿಮೋ 16 →

1ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು:

2ನನ್ನ ಬಲವೂ, ಕೀರ್ತನೆಯೂ ಯಾಹುವೇ.

3ಯೆಹೋವನು ಯುದ್ಧವೀರನು;

4ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು.

5ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು.

6ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ.

7ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ.

8ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು;

9ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು;

10ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು;

11ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು?

12ನೀನು ನಿನ್ನ ಬಲಗೈಯನ್ನು ಚಾಚಿದಾಗ,

13ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ.

14ಜನಾಂಗಗಳು ಇದನ್ನು ಕೇಳಿ ನಡುಗುವರು.

15ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು;

16ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು.

17ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ,

18ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.”

19ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.

20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.

21ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು:

22ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.

23ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ 15:23 ಮಾರಾ ಅಂದರೆ ಕಹಿ.ಮಾರಾ ಎಂದು ಹೆಸರಾಯಿತು.

24ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.

25ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.

26ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.

27ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.

← ವಿಮೋ 14 ವಿಮೋ ವಿಮೋ 16 →

ವಿಮೋ 15 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ