We Believe JesusFé, Esperança e Nova Vida

ಯೆಹೆ 19

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಹೆ 18 ಯೆಹೆ ಯೆಹೆ 20 →

1“ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,

2‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ,

3ಅವಳು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.

4ಜನಾಂಗಗಳು ಈ ವಾರ್ತೆಯನ್ನು ಕೇಳಿ, ಅದಕ್ಕೆ ಗುಂಡಿ ತೋಡಲು ಅದು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತ ದೇಶಕ್ಕೆ ಒಯ್ದರು.

5ಆ ಸಿಂಹಿಣಿಯು ತಾನು ಕಾದುಕೊಂಡಿದ್ದರೂ, ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ, ಪ್ರಾಯಕ್ಕೆ ತಂದಳು.

6ಅದು ಪ್ರಾಯದ ಸಿಂಹವಾಗಿ, ಸಿಂಹಗಳ ನಡುವೆ ತಿರುಗುತ್ತಾ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.

7ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು,

8ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು,

9ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು.

10“‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು,

11ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು,

12ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು,

13ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ.

14ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ.

← ಯೆಹೆ 18 ಯೆಹೆ ಯೆಹೆ 20 →

ಯೆಹೆ 19 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ