1(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ,
3ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
4ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು;
5ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಹಾಕಿ, ಆ ನಿನ್ನ ಕಣಿವೆಗಳನ್ನು ಹೆಣಗಳ ರಾಶಿಯಿಂದ ತುಂಬಿಸುವೆನು.
6ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು;
7ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ,
8ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ,
9“ನಾನು ನಿನ್ನ ನಾಶದ ಸುದ್ದಿಯನ್ನು, ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು.
10ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.”
11ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು.
12ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು.
13ನಾನು ಬಹು ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು;
14ಆಗ ಆ ನೀರು ತಿಳಿಯಾಗುವಂತೆಯೂ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು”
15“ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ,
16ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ,
17(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
18“ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ,
19ಐಗುಪ್ತ್ಯವೇ, ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಹೀನರ ಸಂಗಡ ಮಲಗು.
20ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ.
21ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ,
22ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ;
23ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು,
24ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ;
25ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ;
26ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ;
27ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ,
28ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ!
29ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.
30“ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
31ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು” ಇದು ಕರ್ತನಾದ ಯೆಹೋವನ ನುಡಿ.
32“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ.