1ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
2“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ,
3ಈಗಲೇ ನಿನಗೆ ಅಂತ್ಯವು ಬಂದಿದೆ;
4ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು;
5ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
6ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
7ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು.
8ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು,
9ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು,
10“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ,
11ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ,
12ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ,
13ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು;
14ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ;
15ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು;
16ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು,
17ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
18ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು;
19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು;
20ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು;
21ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು;
22ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು;
23ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ,
24ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು;
25ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.
26ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು;
27ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು,