We Believe JesusFé, Esperança e Nova Vida

ಎಫೆ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

ಎಫೆ ಎಫೆ 2 →

1ದೇವರ ಚಿತ್ತಾನುಸಾರವಾಗಿ 1:1 ಕೊರಿ 1:1 ನೋಡಿರಿಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು 1:1 ಕೆಲವು ಪ್ರತಿಗಳಲ್ಲಿ ಎಫೆಸದಲ್ಲಿರುವ ಎಂಬ ಪದ ಇಲ್ಲ; ಕೊಲೊ 4:16 ನೋಡಿರಿ. ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ 1:1 ಕೊಲೊ 1:2:ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,

21:2 ರೋಮಾ. 1:7 ನೋಡಿರಿ. ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ.

3ನಮ್ಮ ಕರ್ತನಾದ ಯೇಸುಕ್ರಿಸ್ತನ 1:3 ರೋಮಾ. 15:6 ನೋಡಿರಿ. ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು 1:3 ಎಫೆ 1:20; 2:6; 3:10:ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

4ನಾವು ಆತನ ಸನ್ನಿಧಿಯಲ್ಲಿ 1:4 ಎಫೆ 5:27; ಕೊಲೊ 1:22; 1 ಥೆಸ. 4:7:ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು 1:4 ಎಫೆ 2:10; 2 ಥೆಸ. 2:13; 1 ಪೇತ್ರ 1:2:ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.

51:5 ಎಫೆ 1:12,14ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ1:5 ರೋಮಾ. 8 15: ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ 1:5 ಎಫೆ 1:9,11; ರೋಮಾ. 8:29,30. ಮೊದಲೇ ಸಂಕಲ್ಪಮಾಡಿದ್ದನು.

6ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

7ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ 1:7 ಅ. ಕೃ. 20:28:ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ 1:7 ಕೊಲೊ 1:14; ಅ. ಕೃ. 2:38:ಪಾಪ ಕ್ಷಮಾಪಣೆಯೆಂಬ 1:7 ರೋಮಾ. 3:24; 1 ಕೊರಿ 1:30. ವಿಮೋಚನೆಯು ಉಂಟಾಯಿತು.

8ಈ ಕೃಪೆಯನ್ನು ಆತನು 1:8 ರೋಮಾ. 16:25:ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.

9ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.

10ಕಾಲವು ಪರಿಪೂರ್ಣವಾದಾಗ, ಆತನು 1:10 ಕೊಲೊ 1:16, 20:ಭೂಪರಲೋಕಗಳಲ್ಲಿರುವ ಸಮಸ್ತವನ್ನು 1:10 ಕ್ರಿಸ್ತನ ಅಧಿಪತ್ಯಕ್ಕೆ ಅಥವಾ ಪ್ರಭುತ್ವಕ್ಕೆ ಅಧೀನಪಡಿಸಬೇಕೆಂದಿದ್ದನು. ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.

11ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು 1:11 ಎಫೆ 1:5; 3:11; ರೋಮ. 8:28:ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.

12ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.

13ನೀವು ಸಹ ನಿಮ್ಮ ರಕ್ಷಣಾ 1:13 ಕೊಲೊ 1:7:ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, 1:13 ಅ. ಕೃ. 1:4:ವಾಗ್ದಾನಮಾಡಲ್ಪಟ್ಟ 1:13 ಎಫೆ 4:30. ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.

141:14 1 ಪೇತ್ರ. 2:9; ತೀತ. 2:14:ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ 1:14 ಕೆಲವು ಪ್ರತಿಗಳಲ್ಲಿ, ಪವಿತ್ರಾತ್ಮವರವು ನಮ್ಮ ಬಾಧ್ಯತೆಗೆ ಸಂಚಕಾರವಾಗಿದೆ ಎಂದು ಬರೆದಿದೆ. ಪವಿತ್ರಾತ್ಮನು 1:14 ಅ. ಕೃ. 20:32; ಎಫೆ 1:18; 2 ಕೊರಿ 1:22; ಎಫೆ 4:30. ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ1:14 ಮುಂಚಿತವಾಗಿ ಕೊಟ್ಟ ಹಣ ಅಥವಾ ಕಳುಹಿಸಿದ ಸಹಾಯಕ, ಮುಂಚಿತವಾಗಿ ಗೊತ್ತುಮಾಡಿದ ವ್ಯವಸ್ಥೆ ಅಥವಾ ಜಮೀನುದಾರ. . 1:14 ಎಫೆ 1:6, 12:ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.

15ಹೀಗಿರಲಾಗಿ 1:15 ಕೊಲೊ 1:4; ಫಿಲೆ. 5:ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,

161:16 ಕೊಲೊ 1:9:ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.

171:17 ರೋಮಾ. 15:6:ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ 1:17 ಕೊಲೊ 1:9, 10:ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.

181:18 ಅ. ಕೃ. 26:18:ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು 1:18 ಎಫೆ 3:8,16, 17; 1:7; ಕೊಲೊ 1:27; ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,

19ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.

20ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, 1:20 ಎಫೆ 4:10; ಕೊರಿ 15:24; ಯೋಹಾ 3:31:ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

21ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ 1:21 ಫಿಲಿ. 2:9 ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.

22ಇದಲ್ಲದೆ 1:22 ಕೀರ್ತ 8:6; 1 ಕೊರಿ 15:27 ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, 1:22 ಎಫೆ 4:15; 5:23; ಕೊಲೊ 1:18; 2:10,19.ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.

231:23 ಎಫೆ 4:12,16; 5:30; ಕೊಲೊ 1:18. 1 ಕೊರಿ 12:27:ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ 1:23 ಅಥವಾ, ಅದು ಆತನನ್ನು ಪರಿಪೂರ್ಣ ಮಾಡುತ್ತದೆ; ಮತ್ತು ಆತನ ದೊರೆತನವು ಅದರ ಎಲ್ಲಾ ಭಾಗಗಳಲ್ಲಿ ಪರಿಪೂರ್ಣವಾಗಿದೆ. ಎಫೆ 3:19; 4:10; ಕೊಲೊ 3:11:ಅದು ಸಂಪೂರ್ಣತೆಯುಳ್ಳದ್ದಾಗಿದೆ.

ಎಫೆ ಎಫೆ 2 →

ಎಫೆ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ