We Believe JesusFé, Esperança e Nova Vida

ಎಫೆ 4

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಎಫೆ 3 ಎಫೆ ಎಫೆ 5 →

1ನೀವು ದೇವರಿಂದ 4:1 ರೋಮಾ. 8:28:ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ 4:1 ಕೊಲೊ 2:6; 1 ಥೆಸ. 2:12; ಫಿಲಿ. 1:27:ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ 4:1 ಎಫೆ 3:1:ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

2ನೀವು ಪೂರ್ಣ 4:2 ಫಿಲಿ. 2:3; ಕೊಲೊ 3:12; 1 ಪೇತ್ರ. 3:5.ವಿನಯ, ಸಾತ್ವಿಕತ್ವಗಳಿಂದಲೂ 4:2 ಕೊಲೊ 1:11:ದೀರ್ಘಶಾಂತಿಯಿಂದಲೂ ಕೂಡಿದವರಾಗಿ, 4:2 ಕೊಲೊ 3:13:ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.

34:3 ಕೊಲೊ 3:14,15:ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.

4ನೀವು ಕರೆಯಲ್ಪಟ್ಟಾಗ 4:4 ಎಫೆ 1:18:ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, 4:4 ಎಫೆ 2:16:ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, 4:4 ಎಫೆ 2:18:ಒಬ್ಬನೇ ಆತ್ಮನನ್ನು ಹೊಂದಿದವರು,

5ನಿಮ್ಮೆಲ್ಲರಿಗೂ 4:5 ಜೆಕ. 14:9; 1 ಕೊರಿ 8:6:ಕರ್ತನು ಒಬ್ಬನೇ, 4:5 ಎಫೆ 4:13; ಯೂದ. 3:ನಂಬಿಕೆಯು ಒಂದೇ, 4:5 ಗಲಾ. 3:27,28:ದೀಕ್ಷಾಸ್ನಾನ ಒಂದೇ,

64:6 1 ಕೊರಿ 12:5,6:ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. 4:6 ರೋಮಾ. 9:5:ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.

7ಆದರೆ 4:7 ರೋಮಾ. 12:3; ಎಫೆ 4:16; 1 ಕೊರಿ 12:7; ಮತ್ತಾ 25 15:ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.

8ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ,

9“ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ?

10ಇಳಿದು ಬಂದಾತನು, 4:10 ಎಫೆ 1:23:ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ 4:10 ಇಬ್ರಿ. 4:14; 7:26; 9:24:ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.

11ಆತನು4:11 1 ಕೊರಿ 12:28: ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, 4:11 ಅ. ಕೃ. 21:8; 2 ತಿಮೊ. 4:5:ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು 4:11 ಯೆರೆ 3:15; ಅ. ಕೃ 20:28:ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

12ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು,4:12 ಎಫೆ 1:23: ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,

13ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, 4:13 1 ಕೊರಿ 12:27; ಎಫೆ 4:16,29:ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.

14ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು 4:14 ಮತ್ತಾ 11:7; ಇಬ್ರಿ 13:9; ಯಾಕೋಬ. 1:6; ಯೂದ. 12.ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,

154:15 1 ಯೋಹಾ 3:18.ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ 4:15 ಎಫೆ 2:21ಎಲ್ಲಾ ವಿಷಯಗಳಲ್ಲಿಯೂ 4:15 ಎಫೆ 1:22:ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.

164:16 ಕೊಲೊ 2:19:ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, 4:16 ವ. 7 ನೋಡಿರಿಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.

17ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ 4:17 ಎಫೆ 4:22; 2:1-3 ಕೊಲೊ 3:7; 1 ಪೇತ್ರ. 4:3:ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. 4:17 ರೋಮಾ. 1:21; ಕೊಲೊ 2:18:ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.

184:18 ರೋಮಾ. 11:10:ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು 4:18 ಮಾರ್ಕ 3:5:ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ 4:18 ಎಫೆ 2:12:ದೂರವಾಗಿದ್ದಾರೆ.

19ಅವರು ಲಜ್ಜೆಗೆಟ್ಟವರಾಗಿ 4:19 ರೋಮಾ. 1:24,26,28:ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.

20ನೀವಾದರೋ 4:20 ಮೂಲ, ಕ್ರಿಸ್ತನನ್ನು. ಮತ್ತಾ 11:29:ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ.

21ಆತನಿಂದಲೇ ಕೇಳಿ 4:21 ಕೊಲೊ 2:7:ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.

22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ 4:22 ಕೊಲೊ 3:8; ಇಬ್ರಿ. 12:1; ಯಾಕೋಬ. 1:21; 1 ಪೇತ್ರ. 2:1:ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ 4:22 ರೋಮಾ. 6:6; ಕೊಲೊ 3:9:ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

234:23 ರೋಮಾ. 12:2:ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, 4:23 ರೋಮಾ. 16:4:ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.

24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ 4:24 ಎಫೆ 2:10:ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

25ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು 4:25 ಜೆಕ. 8:16; ಕೊಲೊ 3:9:“ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ 4:25 ರೋಮಾ. 12:5:ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

264:26 ಕೀರ್ತ 4:4.“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.

274:27 ಯಾಕೋಬ. 4:7:ಸೈತಾನನಿಗೆ ಅವಕಾಶಕೊಡಬೇಡಿರಿ.

28ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ 4:28 1 ಥೆಸ. 4:11; 2 ಥೆಸ. 3:8, 11:ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.

294:29 ಎಫೆ 5:4; ಕೊಲೊ 3:8; ಮತ್ತಾ 12:34:ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ 4:29 ಕೊಲೊ 4:6:ಕೇಳುವವರಿಗೆ ಹಿತವಾಗಿ ತೋರುವುದು.

304:30 ಯೆಶಾ 63:10; 1 ಥೆಸ. 5:19:ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ 4:30 ಎಫೆ 1:13:ಮುದ್ರೆ ಹೊಂದಿದ್ದೀರಲ್ಲಾ.

314:31 ಕೊಲೊ 3:8:ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.

324:32 ಕೊಲೊ 3:12,3; 1 ಪೇತ್ರ. 3:8:ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು 4:32 2 ಕೊರಿ 2:7,10; ಮತ್ತಾ 6:14:ಕ್ಷಮಿಸಿರಿ.

← ಎಫೆ 3 ಎಫೆ ಎಫೆ 5 →

ಎಫೆ 4 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ