We Believe JesusFé, Esperança e Nova Vida

ಎಫೆ 5

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಎಫೆ 4 ಎಫೆ ಎಫೆ 6 →

1ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ 5:1 ಎಫೆ 4:32; ಮತ್ತಾ 5:7, 48; ಲೂಕ 6:36 ನೋಡಿರಿ. ಆತನನ್ನು ಅನುಸರಿಸುವವರಾಗಿರಿ.

25:2 ರೋಮಾ. 8:37:ಕ್ರಿಸ್ತನು ನಮ್ಮನ್ನು ಪ್ರೀತಿಸಿ 5:2 ರೋಮಾ. 4:25:ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, 5:2 ಇಬ್ರಿ. 7:27; 9:14; 10:10, 12:ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ 5:2 ರೋಮಾ. 14:15; ಕೊಲೊ 3:14; ಯೋಹಾ 13:34:ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

3ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ 5:3 ವ. 12 ನೋಡಿರಿ. ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.

45:4 ಎಫೆ 4:29:ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ 5:4 ವ. 20 ನೋಡಿರಿ. ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

55:5 1 ಕೊರಿ 6:9:ಜಾರನಿಗಾಗಲಿ, ದುರಾಚಾರಿಗಾಗಲಿ, 5:5 ಕೊಲೊ 3:5:ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.

65:6 ಕೊಲೊ 2:8:ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, 5:6 ಕೊಲೊ 3:6; ರೋಮಾ. 1:18:ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.

7ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.

8ಏಕೆಂದರೆ 5:8 ಎಫೆ 2:1, 2; ಅ. ಕೃ. 26:18:ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. 5:8 ಯೆಶಾ 2:5; ಯೋಹಾ 12:35,36:ಬೆಳಕಿನವರಂತೆ ನಡೆದುಕೊಳ್ಳಿರಿ.

95:9 ಗಲಾ. 5:22:ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.

105:10 ರೋಮಾ. 12:2:ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.

11ನಿಷ್ಪ್ರಯೋಜಕವಾದ 5:11 ರೋಮಾ. 13:12; 6:21:ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.

125:12 ವ. 3:ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.

135:13 ಯೋಹಾ 3:20, 21; ಎಫೆ 5:9:ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ 5:13 ಅಥವಾ, ಪ್ರಕಟವಾಗುವಂತದೆಲ್ಲವೂ ಬೆಳಕೇ. ಬಹಿರಂಗಪಡಿಸುವಂಥದ್ದು ಬೆಳಕೇ.

14ಆದ್ದರಿಂದ,

15ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.

16ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ 5:16 ಕೊಲೊ 4:5:ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.

17ಮತ್ತು ಬುದ್ಧಿಹೀನರಾಗಿ ನಡೆಯದೆ 5:17 ರೋಮಾ. 12:2; 1 ಥೆಸ. 4:3; 5:18:ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

185:18 ಜ್ಞಾ. 20:1; 23:20,21; 1 ಕೊರಿ 5:11:ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ 5:18 ಲೂಕ 1:15:ಪವಿತ್ರಾತ್ಮಭರಿತರಾಗಿದ್ದು,

195:19 ಅ. ಕೃ. 16:25; ಕೊಲೊ 3 16; ಯಾಕೋಬ 5:13; 1 ಕೊರಿ 14:26:ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.

20ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ 5:20 ಇಬ್ರಿ. 13:15; ಕೊಲೊ 3:17:ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.

21ಕ್ರಿಸ್ತನಿಗೆ ಭಯಪಡುವವರಾಗಿದ್ದು, 5:21 ಫಿಲಿ. 2:3:ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

22ಸತಿಯರೇ, ನೀವು 5:22 ಎಫೆ 6:5:ಕರ್ತನಿಗೆ ಹೇಗೋ ಹಾಗೆಯೇ 5:22 ಆದಿ 3:16:ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

235:23 ಎಫೆ 1:22, 23:ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ 5:23 1 ಕೊರಿ 11:3:ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. 5:23 1 ಕೊರಿ 6:13:ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.

24ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

25ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ 5:25 ಎಫೆ 5:28, 33; ಕೊಲೊ 3:19; 1 ಪೇತ್ರ 3:7:ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.

26ಆತನು ಅದನ್ನು ಪಾವನಗೊಳಿಸುವುದಕ್ಕಾಗಿ 5:26 ವ. 2 ನೋಡಿರಿ. ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

27ಅದನ್ನು 5:27 ಗೀತೆ. 4:7:ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ 5:27 2 ಕೊರಿ 11:2; ಎಫೆ 1:4:ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು 5:27 ಯೋಹಾ 15:3:ವಾಕ್ಯೋಪದೇಶ ಸಹಿತವಾದ 5:27 ತೀತ. 3:5; ಪ್ರಕ 7:14:ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

28ಹಾಗೆಯೇ 5:28 ಎಫೆ 5:25, 33:ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.

29ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.

305:30 ಆದಿ 2:23; 1 ಕೊರಿ 6:15:ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.

31“ಈ ಕಾರಣದಿಂದ 5:31 ಆದಿ 2, 24; ಮತ್ತಾ 19:5; ಮಾರ್ಕ 10, 7, 8; 1 ಕೊರಿ 6:16:ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.

32ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.

33ಆದರೆ 5:33 ಎಫೆ 5:25, 28:ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. 5:33 1 ಪೇತ್ರ. 3:2, 6:ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

← ಎಫೆ 4 ಎಫೆ ಎಫೆ 6 →

ಎಫೆ 5 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ