1ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.
2ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, 6:2 ವಿಮೋ 20:12; ಧರ್ಮೋ 5:16:“ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
3ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”
4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
5ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ 6:5 ಎಫೆ 5:22:ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
66:6 ಗಲಾ. 1:10.ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.
8ಯಾಕೆಂದರೆ 6:8 ಗಲಾ. 3:28. ಕೊಲೊ 3:11.ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ 6:8 ಕೀರ್ತ 62:12.ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.
9ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. 6:9 ಯೋಹಾ 13:13. ಯೋಬ. 31:13-15.ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ 6:9 ರೋಮಾ. 2:11; ಗಲಾ. 2:6:ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
10ಕಡೆಯದಾಗಿ, ನೀವು 6:10 2 ತಿಮೊ. 2:1; 1 ಯೊಹಾ. 2:14; ಎಫೆ 3:16:ಕರ್ತನಲ್ಲಿಯೂ 6:10 ಎಫೆ 1:19:ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ 6:11 ಎಫೆ 6:13; 2 ಕೊರಿ 10:4:ಸರ್ವಾಯುಧಗಳನ್ನು 6:11 ವ. 14. ರೋಮಾ. 13:12:ಧರಿಸಿಕೊಳ್ಳಿರಿ.
12ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. 6:12 ಎಫೆ 1:21:ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, 6:12 ಲೂಕ 22:53; ಕೊಲೊ 1:13:ಈ ಅಂಧಕಾರದ 6:12 ಎಫೆ 2:2:ಲೋಕಾಧಿಪತಿಗಳ ಮೇಲೆಯೂ, 6:12 ಎಫೆ 3:10:ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
13ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
146:14 1 ಪೇತ್ರ. 1:13; ಯೆಶಾ 11:5ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, 6:14 ಯೆಶಾ 59:17; 1 ಥೆಸ. 5:8; ಯೆಶಾ 61:10; 2 ಕೊರಿ 6:7:ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
156:15 ಯೆಶಾ 52:7; ರೋಮಾ. 10:15:ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
16ಎಲ್ಲಾದಕ್ಕಿಂತ ಹೆಚ್ಚಾಗಿ 6:16 1 ಯೊಹಾ. 5:4:ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು 6:16 ಮತ್ತಾ 13:19; 1 ಯೊಹಾ. 2:14:ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
17ಇದಲ್ಲದೆ 6:17 ಯೆಶಾ 59:17; 1 ಥೆಸ. 5:8:ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು 6:17 ಇಬ್ರಿ. 4:12; ಯೆಶಾ 11:4; 49:2:ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
18ನೀವು 6:18 ಯೂದ. 20:ಪವಿತ್ರಾತ್ಮಪ್ರೇರಿತರಾಗಿ 6:18 ಲೂಕ 18:1:ಎಲ್ಲಾ ಸಮಯಗಳಲ್ಲಿ 6:18 ಕೊಲೊ 4:2-4:ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ 6:18 1 ತಿಮೊ. 2:1:ವಿಜ್ಞಾಪನೆಮಾಡುತ್ತಾ 6:18 ಮಾರ್ಕ 13:33:ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
19ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ 6:19 ಎಫೆ 4:3.ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು 6:19 ಕೊಲೊ 4:3; 1 ಥೆಸ. 5:25; 2 ಥೆಸ. 3:1.ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
20ಆ ಸುವಾರ್ತೆಯ ನಿಮಿತ್ತವಾಗಿ 6:20 2 ಕೊರಿ 5:20.ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ 6:20 ಅ. ಕೃ. 28:20.ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
21ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ 6:21 ಅ. ಕೃ. 20:4. 2 ತಿಮೊ. 4:12; ತೀತ. 3:12:ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
22ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ 6:23 ಗಲಾ. 6:16; ಥೆಸ. 3:16:ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ 6:24 1 ಕೊರಿ 16:22ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.