We Believe JesusFé, Esperança e Nova Vida

ಆದಿ 49

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಆದಿ 48 ಆದಿ ಆದಿ 50 →

1ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

2ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ.

3ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ,

4ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ.

5ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು.

6ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು.

7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು

8ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು.

9ಯೆಹೂದನು 49:9 ಅಥವಾ ಸಿಂಹಿಣಿ.ಪ್ರಾಯದ ಸಿಂಹದಂತಿದ್ದಾನೆ.

10ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ.

11ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು.

12ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು.

13ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು.

14ಇಸ್ಸಾಕಾರನು 49:14 ದನಕುರಿಗಳ ಎರಡು ಮಂದೆ ಅಥವಾ ಹಿಂಡುಗಳ ನಡುವೆ.ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.

15ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ

16ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ

17ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು

18ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.

19ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು,

20ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು.

21ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ.

22ಯೋಸೇಫನು ಫಲಭರಿತವಾದ ವೃಕ್ಷವು,

23ಬಿಲ್ಲುಗಾರರು ಅವನನ್ನು ಆಕ್ರಮಿಸುವರು,

24ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ,

25ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ.

26ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.

27“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ.

28ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.

29ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.

30ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.

31ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.

32ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು” ಎಂದನು.

33ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.

← ಆದಿ 48 ಆದಿ ಆದಿ 50 →

ಆದಿ 49 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ