We Believe JesusFé, Esperança e Nova Vida

ಯೆಶಾ 10

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 9 ಯೆಶಾ ಯೆಶಾ 11 →

1ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.

2ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ,

3ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ?

4ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ.

5ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.

6ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ,

7ಅವನ ಅಭಿಪ್ರಾಯವೋ, ಹಾಗಲ್ಲ.

8ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

9ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ?

10ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,

11ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ,

12ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

13ಏಕೆಂದರೆ ಅವನು ತನ್ನೊಳಗೆ,

14ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ.

15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ?

16ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು.

17ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು.

18ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು.

19ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.

20ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ10:20 ಹೊಡೆದವನ ಅಂದರೆ ಅಶ್ಶೂರದ ಅರಸನ. ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.

21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.

22ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.

23ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.

24ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

25ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”

26ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.

27ಆ ದಿನದಲ್ಲಿ,

28ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ,

29ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ.

30ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ,

31ಮದ್ಮೇನ ದಿಕ್ಕಾಪಾಲಾಯಿತು.

32ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು.

33ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು.

34ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.

← ಯೆಶಾ 9 ಯೆಶಾ ಯೆಶಾ 11 →

ಯೆಶಾ 10 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ