1ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
2ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ,
3ಆತನು ಯೆಹೋವನ ಭಯದಲ್ಲಿ ಆನಂದಿಸುವನು.
4ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು.
5ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.
6ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು.
7ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು.
8ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು;
9ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ;
10ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು;
11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು
12ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ,
13ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು.
14ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು.
15ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ,
16ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ,