We Believe JesusFé, Esperança e Nova Vida

ಯೆಶಾ 12

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 11 ಯೆಶಾ ಯೆಶಾ 13 →

1ಆ ದಿನದಲ್ಲಿ ನೀನು ಹೇಳುವುದೇನೆಂದರೆ,

2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು;

3ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.

4ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ,

5ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

6ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

← ಯೆಶಾ 11 ಯೆಶಾ ಯೆಶಾ 13 →

ಯೆಶಾ 12 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ