We Believe JesusFé, Esperança e Nova Vida

ಯೆಶಾ 13

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 12 ಯೆಶಾ ಯೆಶಾ 14 →

1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.

2ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ,

3ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ.

4ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ!

5ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ,

6ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.

7ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.

8ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು.

9ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ,

10ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ.

11ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ,

12ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು.

13ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ

14ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ13:14 ಇಲ್ಲದಂಥ ಅಥವಾ ಕುರುಬನಿಲ್ಲದಂಥ. ಕುರಿಗಳಂತೆಯೂ

15ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.

16ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು.

17ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು.

18ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು.

19ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ,

20ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು;

21ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು.

22ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.

← ಯೆಶಾ 12 ಯೆಶಾ ಯೆಶಾ 14 →

ಯೆಶಾ 13 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ