We Believe JesusFé, Esperança e Nova Vida

ಯೆಶಾ 14

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 13 ಯೆಶಾ ಯೆಶಾ 15 →

1ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

2ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.

3ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,

4ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು:

5ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.

6ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು,

7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.

8ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ,

9ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ.

10ಅವರೆಲ್ಲರು ನಿನ್ನನ್ನು ಕುರಿತು,

11ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ.

12ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ!

13ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ,

14ಉನ್ನತವಾದ ಮೇಘಮಂಡಲದ ಮೇಲೆ ಏರಿ

15ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.

16ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ,

17ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.

18ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ

19ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ;

20ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ,

21ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ,

22“ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

23“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು.

24ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ,

25ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು.

26ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

27ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.

28ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:

29ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ;

30ಬಡವರಲ್ಲಿ ಹಿರಿಯ ಮಕ್ಕಳು14:30 ಬಡವರಲ್ಲಿ ಹಿರಿಯ ಮಕ್ಕಳು ಅಂದರೆ ಬಡವರಲ್ಲಿ ಕಡು ಬಡವರು. ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು.

31ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ!

32ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ

← ಯೆಶಾ 13 ಯೆಶಾ ಯೆಶಾ 15 →

ಯೆಶಾ 14 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ