1ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನು
2ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ,
3ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ.
4ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ.
5ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು.
6ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ.
7ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು.
8ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ.
9ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು.
10ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ.
11ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.
12ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು
13ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತುಗಳು ಇದೇ.
14ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ.