1ದಮಸ್ಕದ ವಿಷಯವಾದ ದೈವೋಕ್ತಿ.
2ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು.
3ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು.
4“ಆ ದಿನದಲ್ಲಿ,
5ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು.
6ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ,
7ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.
8ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.
9ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ,
10ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ.
11ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ.
12ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ!
13ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ.
14ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ.