1ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.
2ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು
3ಹೊರಟು ಬಂದ ಬಹು ಜನಾಂಗದವರು,
4ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು;
5ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.
6ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ,
7ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ.
8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ.
9ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.
10ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ,
11ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು.
12ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು
13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ
14ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ,
15ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,
16ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ2:16 ಮನೋಹರವಾದ ಪ್ರತಿಯೊಂದು ವಸ್ತುವಿನ ಅಥವಾ ಮನೋಹರವಾದ ಹಡಗು. ಮೇಲೆಯೂ ಆ ದಿನವೂ ತಪ್ಪದೇ ಬರುವುದು.
17ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು.
18ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.
19ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ,
20ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ,
21ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ,
22ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ.