1ದಿವ್ಯದರ್ಶನದ ಕಣಿವೆಯ22:1 ಕಣಿವೆಯ ಯೆರೂಸಲೇಮಿನ. ವಿಷಯವಾದ ದೈವೋಕ್ತಿ.
2ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ;
3ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ;
4ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು,
5ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ,
6ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು.
7ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು,
8ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ.
9ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ;
10ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.22:10 ಮನೆಗಳನ್ನು ಒಡೆದು ಹಾಕಿಬಿಟ್ಟಿರಿ. ಪಟ್ಟಣದ ಹೊರ ಮತ್ತು ಒಳ ಗೋಡೆಗಳ ನಡುವೆ ಕಳಪೆ ಸ್ಥಿತಿಯಲ್ಲಿದ್ದ ಮನೆಗಳನ್ನು ಅವರು ನೆಲಸಮ ಮಾಡಿದರು. ಪಟ್ಟಣದ ಹೊರ ಗೋಡೆಯ ದುರಸ್ತಿಗಾಗಿ ಮನೆಗಳನ್ನು ಕೆಡವಲಾಯಿತು.
11ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ;
12ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು.
13ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು,
14ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ,
15ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,
16‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು?
17ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.
18ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು;
19ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.
20ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆಯುವೆನು.
21ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು;
22ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು;
23ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು.
24ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ,
25ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.