1ತೂರಿನ ವಿಷಯವಾದ ದೈವೋಕ್ತಿ.
2ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ,
3ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ,
4ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ,
5ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು.
6ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!
7ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ;
8ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು,
9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ,
10ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.
11ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ.
12ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ;
13ಇಗೋ, ಕಸ್ದೀಯರ23:13 ಕಸ್ದೀಯರ ಬಾಬೆಲಿನವರು. ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು.
14ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು.
15ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.
16ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ,
17ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.
18ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.