We Believe JesusFé, Esperança e Nova Vida

ಯೆಶಾ 26

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 25 ಯೆಶಾ ಯೆಶಾ 27 →

1ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು,

2ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!

3ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

4ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.

5ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ.

6ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.

7ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.

8ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ;

9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ.

10ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು;

11ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು.

12ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.

13ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.

14ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ.

15ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ;

16ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.

17ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ,

18ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ,

19ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ!

20ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ;

21ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ;

← ಯೆಶಾ 25 ಯೆಶಾ ಯೆಶಾ 27 →

ಯೆಶಾ 26 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ