We Believe JesusFé, Esperança e Nova Vida

ಯೆಶಾ 28

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 27 ಯೆಶಾ ಯೆಶಾ 29 →

1ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ28:1 ಕಿರೀಟದ ಅಥವಾ ಜಯಮಾಲೆ. ಗತಿಯೇ!

2ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ,

3ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.

4ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ,

5ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.

6ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.

7ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ;

8ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.

9ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ?

10ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ.

11ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.

12ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ,

13ಹೀಗಿರಲು ಯೆಹೋವನ ಮಾತು

14ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ,

15ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ;

16ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ,

17ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು,

18ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು;

19ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು;

20ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”

21ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ

22ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ;

23ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.

24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?

25ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ,

26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.

27ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ;

28ಗೋದಿಯ ಕಾಳನ್ನು ನುಚ್ಚು ಮಾಡುವನೋ?

29ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ,

← ಯೆಶಾ 27 ಯೆಶಾ ಯೆಶಾ 29 →

ಯೆಶಾ 28 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ