We Believe JesusFé, Esperança e Nova Vida

ಯೆಶಾ 32

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 31 ಯೆಶಾ ಯೆಶಾ 33 →

1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.

2ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ,

3ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.

4ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.

5ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.

6ಏಕೆಂದರೆ ನೀಚನು ನೀಚವಾಗಿ ಮಾತನಾಡುವನು.

7ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ,

8ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.

9ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ.

10ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ.

11ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ!

12ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.

13ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ.

14ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ,

15ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು,

16ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.

17ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.

18ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

19ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.

20ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!

← ಯೆಶಾ 31 ಯೆಶಾ ಯೆಶಾ 33 →

ಯೆಶಾ 32 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ