1ಸೂರೆಯಾಗದಿದ್ದರೂ ಸೂರೆಮಾಡಿದಿ!
2ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.
3ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.
4ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.
5ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.
6ಜ್ಞಾನವೂ, ತಿಳಿವಳಿಕೆಯೂ,
7ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.
8ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ;
9ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ,
10ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
11ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.
12ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.
13ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.
14“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ,
15ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು,
16ಇವನಿಗೆ ಗಿರಿದುರ್ಗಗಳೇ, ಆಶ್ರಯ
17ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.
18ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.
19ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.
20ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ,
21ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು.
22ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
23ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ.
24ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.