We Believe JesusFé, Esperança e Nova Vida

ಯೆಶಾ 38

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 37 ಯೆಶಾ ಯೆಶಾ 39 →

1ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.

2ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನನ್ನು ಪ್ರಾರ್ಥಿಸಿದನು.

3ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

4ಆಗ ಯೆಹೋವನು ಯೆಶಾಯನಿಗೆ,

5“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.

6ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.

7ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬುದಕ್ಕೆ ಒಂದು ಗುರುತನ್ನು ಕಾಣುವಿ.

8ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.

9ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.

10ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು,

11ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ,

12ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ.

13ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು.

14ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು,

15ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ!

16ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ.

17ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು,

18ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ,

19ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು.

20ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ.

21ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು.

2238:22 ಈ ಅಧ್ಯಾಯದ 21-22 ವಚನಗಳನ್ನು 6 ಮತ್ತು 7 ವಚನಗಳ ನಡುವೆ ಓದಬೇಕು.ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.

← ಯೆಶಾ 37 ಯೆಶಾ ಯೆಶಾ 39 →

ಯೆಶಾ 38 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ