We Believe JesusFé, Esperança e Nova Vida

ಯೆಶಾ 40

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 39 ಯೆಶಾ ಯೆಶಾ 41 →

1“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.

2ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ;

3ಇಗೋ ಒಂದು ವಾಣಿ!

4ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು,

5ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.

6ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು,

7ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!

8ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.

9ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ,40:9 ಚೀಯೋನೇ, ಚೀಯೋನಿಂದ. ನೀನು ಉನ್ನತಪರ್ವತವನ್ನು ಏರು;

10ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ,

11ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು,

12ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು?

13ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?

14ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು?

15ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ.

16(ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು,

17ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.

18ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?

19ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ,

20(ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು,

21ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ?

22ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ;

23ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.

24ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ,

25ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.

26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು?

27ಯಾಕೋಬೇ, ಇಸ್ರಾಯೇಲೇ,

28ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ?

29ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.

30ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.

31ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;

← ಯೆಶಾ 39 ಯೆಶಾ ಯೆಶಾ 41 →

ಯೆಶಾ 40 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ