We Believe JesusFé, Esperança e Nova Vida

ಯೆಶಾ 41

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 40 ಯೆಶಾ ಯೆಶಾ 42 →

1ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ;

2ಮೂಡಣದಿಂದ ಒಬ್ಬನನ್ನು41:2 ಮೂಡಣದಿಂದ ಒಬ್ಬನನ್ನು ಇದು ಪಾರಸಿಯ ಚಕ್ರವರ್ತಿಯಾದ ಕೋರೆಷನು. ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು,

3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದು ಹೋಗುವಂತೆ ಅವರನ್ನು ಹಿಂದಟ್ಟುತ್ತಾ ಹೋದನು.

4ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ

5ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು,

6ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರು” ಎಂದು ಹೇಳಿದನು.

7ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು.

8ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ,

9ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು,

10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು.

11ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು,

12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು.

13ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ.

14ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ,

15“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ,

16ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು.

17ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು,

18ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ,

19ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು.

20ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು

21ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ,

22ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ;

23ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ.

24ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ!

25ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ.

26ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ?

27ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.

28ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ.

29ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ,

← ಯೆಶಾ 40 ಯೆಶಾ ಯೆಶಾ 42 →

ಯೆಶಾ 41 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ