We Believe JesusFé, Esperança e Nova Vida

ಯೆಶಾ 42

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 41 ಯೆಶಾ ಯೆಶಾ 43 →

1ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು.

2ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ.

3ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ,

4ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ,

5ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ,

6“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು,

7ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ,

8ನಾನೇ ಯೆಹೋವನು; ಇದೇ ನನ್ನ ನಾಮವು;

9ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ,

10ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ,

11ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ,

12ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.

13ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು.

14ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು.

15ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ,

16ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು,

17ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು

18ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!

19ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು?

20ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.

21ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.

22ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ.

23ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?

24ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು?

25ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು.

← ಯೆಶಾ 41 ಯೆಶಾ ಯೆಶಾ 43 →

ಯೆಶಾ 42 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ