1ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ,
2ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,
3ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು.
4ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ,
5ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ;
6‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ,
7ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.
8ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
9ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು?
10ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು.
11ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
12ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ;
13ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ.
14ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ,
15ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.
16ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,
17ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ,
18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.
19ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ?
20ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ.
21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.
22“ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.
23ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
24ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.
25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
26ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.
27ನಿನ್ನ ಮೂಲಪಿತೃ43:27 ಮೂಲಪಿತೃ ಯಾಕೋಬ. ಧರ್ಮೋ 26:5, ಹೋಶೇಯ 12:2-4, 12. ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.
28ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”