We Believe JesusFé, Esperança e Nova Vida

ಯೆಶಾ 44

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 43 ಯೆಶಾ ಯೆಶಾ 45 →

1ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:

2ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ,

3ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು,

4ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.

5(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು.

6ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ,

7ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ?

8ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ.

9ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ,

10ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?

11ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ.

12ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ,

13ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು

14ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು.

15ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು.

16ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು.

17ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ,

18ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.

19“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ,

20ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.

21ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ.

22ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ,

23ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು.

24ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ,

25ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ,

26ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ.

27ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.

28ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.

← ಯೆಶಾ 43 ಯೆಶಾ ಯೆಶಾ 45 →

ಯೆಶಾ 44 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ